

ಮಡಿಕೇರಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಜಿಲ್ಲಾ ಘಟಕದ ಕಾರ್ಯಕಾರಿಣಿ ಸಮಿತಿ ಮತ್ತು ಮುಂಚೂಣಿ ನಾಯಕರುಗಳ ಸಭೆ ಮಡಿಕೇರಿಯಲ್ಲಿ ಇತ್ತೀಚೆಗೆ ನಡೆಯಿತು.
ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಬ್ದುಲ್ಲ ಅಡ್ಕರ್‌ರವರ ಅಧ್ಯಕ್ಷತೆಯಲ್ಲಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಲೋಕಸಭಾ ಚುನಾವಣೆಯ ಕುರಿತು ಚರ್ಚಿಸಲಾಯಿತು. ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೂ ಮತದಾನದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಸಭೆ ನಿರ್ಧರಿಸಿತು. ಎಸ್‌ಡಿಪಿಐ ಪಕ್ಷದ ಆಂತರಿಕ ಚುನಾವಣೆ ಸಂಬಂಧ ರೂಪುರೇಷೆಗಳನ್ನು ಸಿದ್ಧಪಡಿಸಲಾಯಿತು.
ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಜಿಲ್ಲಾ ಉಸ್ತುವಾರಿ ನವಾಜ್ ಉಳ್ಳಾಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಶೀರ್ ಅಹಮ್ಮದ್, ಪ್ರಮುಖರಾದ ಮನ್ಸೂರ್, ಮೇರಿ ವೇಗಸ್, ಅಮೀನ್ ಮೊಹಿಸಿನ್, ಟಿ.ಹೆಚ್.ಅಬೂಬಕರ್, ಉಸ್ಮಾನ್ ಸುಂಟಿಕೊಪ್ಪ ಮತ್ತಿತರ ಮುಂಚೂಣಿ ಘಟಕದ ನಾಯಕರುಗಳು ಉಪಸ್ಥಿತರಿದ್ದರು.