ಎರಡನೇ ದಿನದ ಶಿಕ್ಷಣ ಭಾಗೀದಾರರ ಸಮಾವೇಶ

2ND DAY PROGRAM
2ND DAY PROGRAM
Published on

ರಾಯಚೂರು ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿ ಹೊಂದಲು ಶಿಕ್ಷಣ, ಆರೋಗ್ಯ ಅತ್ಯಂತ ಮುಖ್ಯವಾಗಿದ್ದು ಇದಕ್ಕೆ ಮಂಡಳಿ ಹೆಚ್ಚಿನ ಒತ್ತು ನೀಡುತ್ತದೆ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಹೇಳಿದರು.

ನಗರದ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಕಲಬುರಗಿ ಆಯುಕ್ತಾಲಯ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದಿಂದ ಹಮ್ಮಿಕೊಂಡಿದ್ದ ಎರಡನೇ ದಿನದ ಶಿಕ್ಷಣ ಭಾಗೀದಾರರ ಸಮಾವೇಶ ಹಾಗೂ ಕಲ್ಯಾಣ ಕರ್ನಾಟಕ ಶೈಕ್ಷಣಿಕ ಅಧ್ಯಯನ ಸಮಿತಿಯ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು, ಅಭಿವೃದ್ಧಿಗಾಗಿ ಶಿಕ್ಷಣ ಅತ್ಯಂತ ದೊಡ್ಡ ಅಸö ಎಂಬ ಮಾತಿನಂತೆ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಪ್ರೊ.ನಂಜುAಡಪ್ಪ ಅವರ ವರದಿ ಪ್ರಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯಾಗಬೇಕಾದರೆ ಮೊದಲು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಅಭಿವೃದ್ದಿ ಹೊಂದಬೇಕು. ಈ ನಿಟ್ಟಿನಲ್ಲಿ ಕೇವಲ ಒಬ್ಬಿಬ್ಬರಿಂದ

ಮಾತ್ರ ಈ ಕಾರ್ಯ ಸಾಧ್ಯವಾಗುವುದಿಲ್ಲ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿಯನ್ನು ಕಿತ್ತು ಹಾಕಲು ಸರ್ಕಾರದಿಂದ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಮುಖ್ಯವಾಗಿ ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗ ೩೦ ಕೋಟಿ ವೆಚ್ಚದಲ್ಲಿ ೧೦೦೮ ಶಾಲೆಗಳಲ್ಲಿ ನರ್ಸರಿ ತರಗತಿಗಳನ್ನು ಪ್ರಾರಂಭಿಸಲಾಗಿದೆ.

ತರಗತಿ ಆರಂಭಿಸಿದ ಒಂದೂವರೆ ತಿಂಗಳಿನಲ್ಲಿ ೪೨ ಸಾವಿರಕ್ಕೂ ಹೆಚ್ಚಿನ ಮಕ್ಕಳು ದಾಖಲಾಗಿದ್ದಾರೆ. ಇದೊಂದು ಐತಿಹಾಸಿಕ ಬದಲಾವಣೆಗೆ ಸಾಕ್ಷಿಯಾಗಿದೆ. ಇದರ ಜೊತೆಗೆ ೧೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗಿದೆ ಎಂದರು.\

ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಮಾತನಾಡಿ, ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಶೈಕ್ಷಣಿಕ ಅಧ್ಯಯನ

ಸಮಿತಿಯನ್ನು ರಚಿಸಿರುವುದು ಅತ್ಯಂತ ಸಂತಸದ ವಿಚಾರವಾಗಿದೆ ಆದರೆ ಅಧ್ಯಯನ ಸಮಿತಿಗಳು ಕೇವಲ

ಇಲಾಖೆಯ ದಾಖಲೆಗಳನ್ನು ಪರಿಗಣಿಸಿ ವರದಿ ನೀಡುವುದಲ್ಲ. ಸ್ಥಳಕ್ಕೆ ಅನಿರೀಕ್ಷಿತ ಭೇಟಿ ಮಾಡಿ ಶಾಲೆಯಲ್ಲಿರುವ

ವಾಸ್ತವಾಂಶಗಳನ್ನು ಪರಿಗಣಿಸಬೇಕು ಆಗ ಮಾತ್ರ ಶಾಲೆಗಳಲ್ಲಿರುವ ಸಮಸ್ಯೆಗಳು ತಜ್ಞರಿಗೆ ತಿಳಿಯುತ್ತವೆ ಎಂದು

ಹೇಳಿದರು.

ಕೇವಲ ಜಿಲ್ಲಾ ಕೇಂದ್ರದಲ್ಲಿ ಅದ್ಯಯನ ನಡೆಸದೇ ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಅದ್ಯಯನ

ಸಮಿತಿಯ ಸದಸ್ಯರು ತೆರಳಿ ಗ್ರಾಮೀಣ ಭಾಗದಲ್ಲಿರುವ ಶಾಲೆಗಳ ಪರಿಸ್ಥಿತಿ ಹಾಗೂ ವಿದ್ಯಾರ್ಥಿಗಳಿಗಾಗುವ

ಸಮಸ್ಯೆಗಳು ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಽಕಾರಿ ಕೆ.ನಿತೀಶ್ ಕೆ.,ಕಲಬುರಗಿ ವಿಭಾಗಿಯ ಮಟ್ಟದ ಶಿಕ್ಷಣ ಇಲಾಖೆಯ ಆಯುಕ್ತ ಎಸ್.ಆಕಾಶ, ಶಿಕ್ಷಣ ಇಲಾಖೆಯ ನಿರ್ದೇಶಕಿ ಮಮತಾ, ಶೈಕ್ಷಣಿಕ ಅಧ್ಯಯನ ಸಮಿತಿ ಅಧ್ಯಕ್ಷೆ ಡಾ.ಛಾಯಾ ದೇವಗಾಂವಕರ್, ಸಮಿತಿ ಸದಸ್ಯರಾದ ಎನ್.ಬಿ.ಪಾಟೀಲ್, ಖದೀರ್, ಮಲ್ಲಿಕಾರ್ಜುನ ಎಂ.ಎಸ್, -Áಂಸಿಸ್ ಬಾಷ್ಕಮ್, ರುದ್ರೇಶ. ಎಸ್, ಯಶವಂತ ಹರಸೂರು, ಡಾ.ನಾಗಾಬಾಯಿ.ಬಿ.ಬುಳ್ಳಾ ಸೇರಿದಂತೆ ಅನೇಕರು ಇದ್ದರು.

------------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net