"ಏರ್ ಪೋರ್ಟ್ ಯಾರೂ ಹೈಜಾಕ್ ಮಾಡಲಿಕ್ಕೆ ಆಗೋಲ್ಲ "

Param_Cong
Published on

ತುಮಕೂರು:ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಕುರಿತು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿ 35  ಶಾಸಕರು ಬರೆದಿರುವ ಪತ್ರವನ್ನು ಕೇಂದ್ರ ಸರ್ಕಾರ ಪರಿಗಣಿಸಬೇಕು. ಶಿರಾ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾದರೆ ನಮಗೆ ಸಂತೋಷವಾಗುತ್ತೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಸಿದ್ದಗಂಗಾ ಮಠಕ್ಕೆ ಗುರುವಾರ ಬೆಳಗ್ಗೆ ಭೇಟಿ ನೀಡಿ ಮಠಾಧ್ಯಕ್ಷ ಸಿದ್ಧಲಿಂಗ ಶ್ರೀಗಳ ಆಶೀರ್ವಾದ ಪಡೆದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎರಡು ಕಡೆ ಸರ್ವೆ ಮಾಡಿದ್ದಾರೆ. ಒಂದು ನೆಲಮಂಗಲ, ಕನಕಪುರ ಭಾಗದಲ್ಲಿ ಸರ್ವೆ ಆಗಿದೆ. ವಿಮಾನ ನಿಲ್ದಾಣ ಮಾಡಲು ಅವರದ್ದೇ ಆದ ಮಾನದಂಡಗಳಿರುತ್ತವೆ. ಅದರಂತೆಯೇ ಶಿಫಾರಸು ಮಾಡುತ್ತಾರೆ. ಶಿರಾಗೆ ಸರ್ವೆ ಮಾಡಲು ಬಂದಿಲ್ಲ. ಇದಕ್ಕೆ ಪರಿಗಣಿಸಿದರೆ ಬಹಳ ಅನುಕೂಲವಾಗಲಿದೆ ಎಂದರು.

ತುಮಕೂರು ಜಿಲ್ಲೆಯ ವಸಂತನರಸಾಪುರ, ಶಿರಾ ಭಾಗದಲ್ಲಿ ಎಲ್ಲಿಯೇ ವಿಮಾನ ನಿಲ್ದಾಣವಾದರೆ ಸುಮಾರು 20 ಜಿಲ್ಲೆಗಳಿಗೆ ಅನುಕೂಲವಾಗಲಿದೆ. ವಿಮಾನ ನಿಲ್ದಾಣ ಯೋಜನೆಯನ್ನು ಯಾರು ಹೈಜಾಕ್ ಮಾಡಲು ಆಗುವುದಿಲ್ಲ. ತಾಂತ್ರಿಕ ಸಾಧ್ಯತೆಗಳ ಮೇಲೆ ನಿರ್ಮಿಸಲಾಗುತ್ತದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net