ಜೂನಿಯರ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ

aditi
Published on

ಕುಂದಾಪುರ: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ, ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ನಡೆಸಿದ 2024ನೇ ಸಾಲಿನ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ನಾವಡ ಶೇ.99.5 ಅಂಕಗಳಿಸಿ ರಾಜ್ಯದಲ್ಲಿ ದ್ವಿತೀಯ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾಳೆ. ಈಕೆ ಕುಂದಾಪುರದ ಡಾ.ಸಂದೀಪ ನಾವಡ, ಡಾ.ಪ್ರೀತಿ ನಾವಡ ದಂಪತಿ ಪುತ್ರಿ. ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಕುಂದಾಪುರದ ನೃತ್ಯ ವಸಂತ ನಾಟ್ಯಾಲಯದಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net