

ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಜರುಗಿದ ಕುಂದಾಪುರ ತಾಲೂಕುಮಟ್ಟದ 17ರ ವಯೋಮಾನದ ಹುಡುಗರ ಕ್ರಿಕೆಟ್ ಪಂದ್ಯಾಟದಲ್ಲಿ ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಹುಡುಗರ ತಂಡ ದ್ವೀತಿಯ ಸ್ಥಾನ ಪಡೆದುಕೊಂಡಿದೆ.
ತಂಡದ ಐವರು ವಿದ್ಯಾರ್ಥಿಗಳಾದ ಆಯುಷ್ ಶೆಟ್ಟಿ, ಅನುಜ್ ಅಂಬ್ಲಿ, ಕನಿಷ್ಕ್, ಸನ್ವಿತ್, ಅಭಿಷ್ ಜಿಲ್ಲಾಮಟ್ಟದ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ್ದಾರೆ. ಸಂಸ್ಥೆ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್‌ಕುಮಾರ್, ಸೂರ್ಯ ತರಬೇತಿ ನೀಡಿದ್ದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಮುಖ್ಯಶಿಕ್ಷಕ ಪ್ರದೀಪ್ ಕೆ. ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.