

ಕುಂಬಳೆ: ಶೇಣಿಯಲ್ಲಿ ಇತ್ತೀಚೆಗೆ ನಡೆದ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ಹೈಸ್ಕೂಲ್ ವಿಭಾಗದ ಲಘು ಸಂಗೀತ ಸ್ಪರ್ಧೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆ 8ನೇ ತರಗತಿ ಅಮೃತ ಕೆ.ಎ ಗ್ರೇಡ್‌ನೊಂದಿಗೆ ದ್ವಿತೀಯ ಸ್ಥಾನಗಳಿಸಿದ್ದಾರೆ. ಬೇಳ ನಿವಾಸಿ ನಾರಾಯಣ ಪ್ರಕಾಶ್, ಅಶ್ವಿನಿ ದಂಪತಿ ಪುತ್ರಿಯಾದ ಅಮೃತಾಳ ಸಾಧನೆಗೆ ಶಾಲಾ ರಕ್ಷಕ-ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.