

ಸೂಕ್ತ ಸಾರಿಗೆ ವ್ಯವಸ್ಥೆ: ಪ್ರತಿ ಪರೀಕ್ಷಾ ಕೇಂದ್ರಗಳಿಗೂ ಮುಖ್ಯ ಉಸ್ತುವಾರಿ, ಉಪ ಮುಖ್ಯ ಅಧೀಕ್ಷಕರು ಹಾಗೂ ಸ್ಥಾನಿಕ ಜಾಗೃತ ದಳದ ಸಿಬ್ಬಂದಿ ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಮುತ್ತ ನಿಷೇಧಿತ ಪ್ರದೇಶವಾಗಿದ್ದು, ಎಲ್ಲ ಝರಾಕ್ಸ್ ಅಂಗಡಿ ಪರೀಕ್ಷಾ ವೇಳೆ ಮುಚ್ಚುವಂತೆ ಸೂಚಿಸಲಾಗಿದೆ. ವಿದ್ಯುತ್ ವ್ಯತ್ಯಯ ಉಂಟಾಗದಂತೆ ನಿಗಾ ಇರಿಸಲು ಹೆಸ್ಕಾ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಬರಲು ಸಮಸ್ಯೆ ಉಂಟಾಗದಂತೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಹಾಗೂ ಆರೋಗ್ಯ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಎಂ.ಎಂ. ಕಾಂಬಳೆ ತಿಳಿಸಿದ್ದಾರೆ.
ಪರೀಕ್ಷಾ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ. ಪ್ರತಿ ಮಾರ್ಗಕ್ಕೆ ಒಬ್ಬರಂತೆ 26 ಮಾರ್ಗಾಧಿಕಾರಿ ನಿಯೋಜನೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ದ್ವಿತೀಯ ಪಿಯು ಮುಖ್ಯ ಪರೀಕ್ಷೆಯು ವೆಬ್‌ಕಾಸ್ಟಿಂಗ್ ಮೂಲಕ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ಸರ್ವ ಸಿದ್ಧತೆ ಮಾಡಿಕೊಂಡಿದೆ. ಅಲ್ಲದೇ, ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಪಾಡಲು ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ 96ಕ್ಕೂ ಅಧಿಕ ಸಿಸಿಟಿವಿ ಅಳವಡಿಸಿದೆ. ಜತೆಗೆ ಪ್ರತ್ಯೇಕ ತಾಂತ್ರಿಕ ಸಿಬ್ಬಂದಿ ನಿಯೋಜನೆ ಮಾಡಿದೆ.
ಮಾರ್ಚ್ 1ರಿಂದ ಆರಂಭವಾಗುವ ದ್ವಿತೀಯ ಪಿಯು ಪರೀಕ್ಷೆಯು ಮಾ.20ವರೆಗೂ ನಡೆಯಲಿದೆ. ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 54,662 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. 96 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. ಪಾರದರ್ಶಕ, ಸುಸೂತ್ರ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ಸನ್ನದ್ಧವಾಗಿದೆ.
ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ನೇರ ಪ್ರಸಾರ ಸೌಲಭ್ಯ ಇರಲಿದೆ. ಬೆಳಗಾವಿ ಜಿಪಂ ಕಚೇರಿ, ಚಿಕ್ಕೋಡಿ ಎಸಿ ಕಚೇರಿಯಲ್ಲಿ ಅಧಿಕಾರಿಗಳು ನೇರ ಪ್ರಸಾರ ವೀಕ್ಷಿಸಲಿದ್ದಾರೆ. ಈ ಮೂಲಕ ಪರೀಕ್ಷಾ ಅಕ್ರಮ ತಡೆಗಟ್ಟಿ ಪಾರದರ್ಶಕವಾಗಿ ಪರೀಕ್ಷೆ ನಡೆಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ.
ಒಟ್ಟು 96 54,662
ಚಿಕ್ಕೋಡಿ 55 31,205
ಬೆಳಗಾವಿ 41 23,457
ಶೈಕ್ಷಣಿಕ ಜಿಲ್ಲೆ ಪರೀಕ್ಷಾ ಕೇಂದ್ರ ವಿದ್ಯಾರ್ಥಿಗಳು
ದ್ವಿತೀಯ ಪಿಯು ಪರೀಕ್ಷೆ ಸಮಗ್ರ ವಿವರ
ಈ ಬಾರಿ ದ್ವಿತೀಯ ಪಿಯು ಪರೀಕ್ಷೆ ಸುಗಮವಾಗಿ, ಯಾವುದೇ ರೀತಿಯ ಗೊಂದಲ ಉಂಟಾಗದಂತೆ ನಡೆಸಲು ಎಲ್ಲ ರೀತಿ ಸಿದ್ಧತೆ ಮಾಡಿಕೊಂಡಿವೆ. ಪ್ರಶ್ನೆಪತ್ರಿಕೆಗಳ ವಿತರಣೆ ವೇಳೆ ಸಮಸ್ಯೆ ಉಂಟಾಗದಂತೆ ನೋಡಲ್ ಅಧಿಕಾರಿಗಳನ್ನು ನಿಯೋಜನೆ ಮಾಡಿದ್ದೇವೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ ಕಳೆದುಕೊಳ್ಳದೆ ಧೈರ್ಯವಾಗಿ ಪರೀಕ್ಷೆ ಬರೆಯಬೇಕು. ಮೊಹಮ್ಮದ ರೋಷನ್, ಜಿಲ್ಲಾಧಿಕಾರಿ ಈ ಬಾರಿ ದ್ವಿತೀಯ ಪಿಯು ಪರೀಕ್ಷೆ ನಡೆಯುವ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಅಳವಡಿಸಿದ್ದು, ಪರೀಕ್ಷೆಯ ವೇಳೆ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದೇವೆ. ವಿದ್ಯಾರ್ಥಿಗಳು ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಧೈರ್ಯವಾಗಿ ಪರೀಕ್ಷೆ ಬರೆಯಬೇಕು. ರಾಹುಲ ಶಿಂಧೆ, ಜಿಪಂ ಸಿಇಒ