ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

15ANKOLA2 (1)
Published on

ಕಾರವಾರ : ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಅಂಕೋಲಾ ತಾಲೂಕಿನ ಬೆಳಂಬಾರ ಗ್ರಾಪಂ.ವ್ಯಾಪ್ತಿಯ ತಾಳೇಬೈಲ್ ಗ್ರಾಮದಲ್ಲಿ ನಡೆದಿದೆ.
ಶಿಲ್ಪಾ ಎಂ.ಗೌಡ (17) ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ಪಪೂ ಕಾಲೇಜಿನ ವಿದ್ಯಾರ್ಥಿನಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಷ ಸೇವಿಸಿದ್ದಾಳೆ. ಅಸ್ವಸ್ಥಗೊಂಡ ಯುವತಿಯನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಮೃತ ಪಟ್ಟಿದ್ದಾಳೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪರೀಕ್ಷೆ ನಿರೀಕ್ಷೆಯಷ್ಟು ಚೆನ್ನಾಗಿ ಬರೆದಿಲ್ಲ ಎನ್ನುವ ಬೇಸರಕ್ಕೆ ಸಾವಿಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಮಾ.9 ರಂದು ಆರಂಭವಾಗಿರುವ ಪಿಯು ದ್ವಿತೀಯ ಪರೀಕ್ಷೆಯಲ್ಲಿ ಆರಂಭದ ಎರಡು ವಿಷಯಗಳ ಪರೀಕ್ಷೆ ಬರೆದಿದ್ದಾಳೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net