ಎರಡನೇ ಬಾರಿ ಗ್ರಾಮ ಪಂಚಾಯತ್ ಎಲೆಕ್ಷನ್​ ಮುಂದೂಡಿಕೆ; ಚುನಾವಣೆ ಬಹಿಷ್ಕರಿಸಿದ ಗ್ರಾಮಸ್ಥರು

Holavanahalli_GP
Published on

ತುಮಕೂರು: ಸತತ ಎರಡನೇ ಬಾರಿಯೂ ತಿಪಟೂರು ತಾಲೂಕು ಹೊನ್ನವಳ್ಳಿ ಗ್ರಾಪಂ ಚುನಾವಣೆಯನ್ನು ಜನರು ಬಹಿಷ್ಕರಿಸಿದ್ದು ಜಿಲ್ಲಾಡಳಿತದ ನೆಮ್ಮದಿ ಕೆಡಿಸಿದೆ. ಶಾಶ್ವತ ಬರಕ್ಕೆ ತುತ್ತಾಗಿರುವ ತಾಲೂಕಿನಲ್ಲಿ ನೀರಾವರಿ ಯೋಜನೆಗೆ ಆಗ್ರಹಿಸಿ ಈ ಹಿಂದೆ ಗ್ರಾಪಂ ಚುನಾವಣೆ ಬಹಿಷ್ಕರಿಸಿದ್ದರಿಂದ ಚುನಾವಣೆ ಮುಂದೂಡಲಾಗಿತ್ತು. ಈಗಲೂ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಚುನಾವಣೆ ಮುಂದೂಡಲಾಗಿದೆ.

ಮಾರ್ಚ್ 29ರಂದು ಚುನಾವಣೆ ನಡೆಸಲು ಮಾ.10ರಂದು ಜಿಲ್ಲಾಡಳಿತ ಅಧಿಸೂಚನೆ ಹೊರಡಿಸಿತ್ತು. ಮಾ.17ರವರೆಗೂ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಕೊನೆಯ ದಿನದವರೆಗೂ ಯಾರೊಬ್ಬರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಿಕೆಯಾಗಿದೆ. ಬೇಡಿಕೆ ಈಡೇರದಿದ್ದರೆ ಮುಂಬರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸೇರಿ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸುವ ಎಚ್ಚರಿಕೆಯನ್ನು ಸ್ಥಳೀಯರು ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net