ತಾಲೂಕು ಮಟ್ಟಕ್ಕೆ ಆಯ್ಕೆಯಾದ ಸೆಕ್ರೆಟ್ ಹಾರ್ಟ್ ವಿದ್ಯಾರ್ಥಿಗಳು

31.npk-4
ನಾಪೋಕ್ಲು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸೆಕ್ರೆಟ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವೈಯಕ್ತಿಕ ವಿಭಾಗದ ಕ್ರೀಡಾಕೂಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Published on

ನಾಪೋಕ್ಲು: ಸಮೀಪದ ಚೆಯ್ಯಂಡಾಣೆಯ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ನಾಪೋಕ್ಲು ವಲಯ ಮಟ್ಟದ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಇಲ್ಲಿನ ಸೆಕ್ರೆಟ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ವೈಯಕ್ತಿಕ ವಿಭಾಗದ ಕ್ರೀಡಾಕೂಟದಲ್ಲಿ ಭಾಗವಹಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

10ನೇ ತರಗತಿ ವಿದ್ಯಾರ್ಥಿ ತನ್ವೀರ್ ಶಾರ್ಟ್‌ಪುಟ್ ಪ್ರಥಮ, 9ನೇ ತರಗತಿಯ ಕೆ.ಎಂ.ತೌಸಿಫ್ ಚೆಸ್‌ನಲ್ಲಿ ಪ್ರಥಮ, 8ನೇ ತರಗತಿಯ ವಿಧಾ ಡಿಸ್ಕಸ್ ಥ್ರೋನಲಿ ್ಲದ್ವಿತೀಯ, ಕೆ.ಎಚ್.ನಶ್ರೀನಾ ಎತ್ತರ ಜಿಗಿತದಲ್ಲಿ ದ್ವಿತೀಯ, 7ನೇ ತರಗತಿಯ ಇಂಚರಾ ಶಾರ್ಟ್‌ಪುಟ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಪ್ರೌಢಶಾಲಾ ವಿಭಾಗದಲ್ಲಿ ಗಂಡು ಮಕ್ಕಳ ವಾಲಿಬಾಲ್ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net