ಭದ್ರತೆಗೆ ಬಜೆಟ್‌ನಲ್ಲಿ ಆದ್ಯತೆ

2sor2
ಜಡೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ಚಲೋಗೆ ಟಿ.ಡಿ.ಮೇಘರಾಜ್ ಚಾಲನೆ ನೀಡಿದರು. ರಾಜು ತಲ್ಲೂರು, ಪ್ರಕಾಶ್ ತಲಕಾಲಕೊಪ್ಪ, ಶಿವಕುಮಾರ್ ಇತರರಿದ್ದರು.
Published on

ಸೊರಬ: ಜಾಗತಿಕ ಮಟ್ಟದಲ್ಲಿ ದೇಶವನ್ನು ಎಲ್ಲ ರಂಗದಲ್ಲೂ ಮೇಲ್ದರ್ಜೆಗೆ ಕೊಂಡೊಯ್ಯವ ನಿಟ್ಟಿನಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲು ದೇಶ ಎದುರು ನೋಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಹೇಳಿದರು.

ತಾಲೂಕಿನ ಜಡೆ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗ್ರಾಮ ಚಲೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಶದ ಜನರ ಭದ್ರತೆಗಾಗಿ ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದೆ. ಯುವಕರಿಗೆ, ಮಹಿಳೆಯರಿಗೆ ನೀಡಿರುವ ಯೋಜನೆಗಳ ಮನೆ ಮನೆಗೆ ತಲುಪಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಕೇಂದ ಸರ್ಕಾರ ಅನುಷ್ಠಾನಗೊಳಿಸಿದ ಕಾರ್ಯಕ್ರಮಗಳನ್ನು ಜನತೆಗೆ ಮುಟ್ಟಿಸುವ ಮೂಲಕ ಲೋಕಸಭೆ ಚುನಾವಣೆ ಎದುರಿಸಲಾಗುವುದು. ವಿಕಸಿತ ಭಾರತ ಕಾರ್ಯಕ್ರಮ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಜನಧನ, ಸಂವಿಧಾನದ 370ನೇ ವಿಧಿ ಜಾರಿ, ಪ್ರಧಾನಮಂತ್ರಿ ಕೃಷಿ ಸಮ್ಮಾನ್‌ನಂತಹ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ದೇಶ ಜಾಗತಿಕ ಶ್ರೇಣಿಯಲ್ಲಿ ಅಭಿವೃದ್ಧಿಯ ಮುನ್ನಡೆಯ ಛಾಪು ಮೂಡಿಸಿದೆ ಎಂದು ತಿಳಿಸಿದರು.
ಮಡಿವಾಳ ಮಾಚಿದೇವ ನಿಗಮದ ಮಾಜಿ ಅಧ್ಯಕ್ಷ ರಾಜು ತಲ್ಲೂರು, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಕಡಸೂರು, ಮಲ್ಲಿಕಾರ್ಜುನ ದ್ವಾರಳ್ಳಿ, ಬಸವನಗೌಡ ಮಲ್ಲಾಪುರ, ದೇವೇಂದ್ರಪ್ಪ ಚನ್ನಾಪುರ, ಗುರುಕುಮಾರ್ ಪಾಟೀಲ್, ರಾಜು ಗೌಡ ತುಮರಿಕೊಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net