ನೀರಿನ ಸಮಸ್ಯೆ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಿ : ಸಚಿವ ಡಾ.ಶರಣಪ್ರಕಾಶ ಪಾಟೀಲ ಸೂಚನೆ*

IMG-20250325-WA0021
Published on

ಸೇಡಂ ,: ಬೇಸಿಗೆ ಆರಂಭವಾದ್ದರಿಂದ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕೆಂದು *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್* ತಾಲೂಲಿನ ಪಿಡಿಓ‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸೇಡಂ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ 'ಟಾಸ್ಕ್‌ ಪೋರ್ಸ್' ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಂಚಾಯತ್ ಮಟ್ಟದಲ್ಲಿ ಪಿಡಿಓಗಳು ಬೋರ್ ವೆಲ್ ಗಳು ಹಾಗೂ ಜಲ ಮೂಲಗಳನ್ನು ಪರೀಕ್ಷಿಸಿ ಕ್ರಮ ಕೈಗೊಂಡು ವರದಿ ಸಲ್ಲಿಸಬೇಕು. ಹೆಚ್ಚು ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಶಾಶ್ವತ ಬೋರ್ ವೆಲ್‌ ಕೊರೆಸಿ, ಇತರೆ ಬೋರ್ ವೆಲ್ ಗಳನ್ನು ಫ್ಲಶಿಂಗ್ ಮಾಡಿಸಿ ಜನರ ಅನುಕೂಲಕ್ಕೆ‌ ತಕ್ಕಂತೆ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದರು.

ಸೇಡಂ ತಾಲೂಕಿನಲ್ಲಿ ನೀರಿನ ಪೂರೈಕೆಯಲ್ಲಿ ಎಲ್ಲಿಯೂ ಲೋಪಗಳಾಗದಂತೆ ಎಚ್ಚರಿಕೆ ವಹಿಸಿ ಎಂದು ಸೂಚಿಸಿ, ಅನುದಾನದ ಬಳಕೆಯಲ್ಲಿ ಕುಡಿಯುವ ನೀರಿನ ಸರಬರಾಜಿಗೆ ಆದ್ಯತೆ ನೀಡಿ ಎಂದರು.

ಪಿಡಿಓಗಳು ಗ್ರಾಮಗಳಿಗೆ ಭೇಟಿ‌ ನೀಡಿ ಒಂದು ವಾರದಲ್ಲಿ ನನಗೆ ವರದಿ ಸಲ್ಲಿಸಬೇಕು. ಹೆಚ್ವು ಬಿಸಿಲಿದೆ ಎಂದು ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿ ವರದಿ ಸಲ್ಲಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ತಹಶಿಲ್ದಾರ ಶ್ರೇಯಾಂಕ್ ಪಾಟೀಲ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಪಿಡಿಓಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net