ತೆಕ್ಕಟ್ಟೆ ಸೇವಾ ಸಂಗಮ ವಿದ್ಯಾಕೇಂದ್ರದಲ್ಲಿ ಅಂಕುರ ಶಿಬಿರ

shibira
ಅಂಕುರ ಶಿಬಿರವನ್ನು ಶಾಲೆ ಆಡಳಿತ ಮಂಡಳಿ ಕೋಶಾಧಿಕಾರಿ ಸುಹಾಸ್ ಪೈ ಉದ್ಘಾಟಿಸಿದರು.
Published on

ಕೋಟ: ಬಿಡುವಿನ ಅವಧಿಯನ್ನು ಸುಂದರವಾಗಿಸುದರ ಜೊತೆಗೆ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಸಹಪಠ್ಯ ಚಟುವಟಿಕೆಗಳಲ್ಲಿನ ಸೃಜನಶೀಲತೆಯ ಅನಾವರಣ ಶಿಬಿರಗಳಿಂದ ಸಾಧ್ಯ. ಒಳ್ಳೆಯ ಹವ್ಯಾಸಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಲು ಶಿಬಿರ ಸಹಕಾರಿಯಾಗುತ್ತದೆ ಎಂದು ತೆಕ್ಕಟ್ಟೆ ಸೇವಾ ಸಂಗಮ ವಿದ್ಯಾಕೇಂದ್ರದ ಆಡಳಿತ ಮಂಡಳಿ ಕೋಶಾಧಿಕಾರಿ ಸುಹಾಸ್ ಪೈ ಹೇಳಿದರು.

ತೆಕ್ಕಟ್ಟೆ ಸೇವಾ ಸಂಗಮ ವಿದ್ಯಾಕೇಂದ್ರದಲ್ಲಿ ಇತ್ತೀಚಿಗೆ ಶಾಲಾ ಮಕ್ಕಳಿಗಾಗಿ ಎರಡು ದಿನಗಳ ಕಾಲ ನಡೆದ ಅಂಕುರ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಆಡಳಿತ ಮಂಡಳಿ ಸದಸ್ಯ ಸುರೇಶ್ ಆಚಾರ್ಯ, ಮುಖ್ಯ ಶಿಕ್ಷಕ ಹರ್ಷ ಕೋಟೇಶ್ವರ, ಶಿಬಿರದ ಸಂಪನ್ಮೂಲ ವ್ಯಕ್ತಿ ಕಾವ್ಯ ಹರ್ಷ ಕೊಟೇಶ್ವರ ಮತ್ತು ಅಧ್ಯಾಪಕ ವೃಂದ, ಸಿಬ್ಬಂದಿ ಉಪಸ್ಥಿತರಿದ್ದರು. ಸುಜಾತಾ ಸ್ವಾಗತಿಸಿದರು. ಶ್ರುತಿ ವಂದಿಸಿದರು. ಶಕೀಲಾ ಎಚ್. ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net