ಅಂಗನವಾಡಿ ಕೇಂದ್ರದಲ್ಲಿ ಸೀಮಂತ ಕಾರ್ಯಕ್ರಮ

poshan abiyana
Published on

ಮಡಿಕೇರಿ: ಪೋಷಣ್ ಮಾಸಾಚರಣೆ ಅಂಗವಾಗಿ ಸಿಂಕೋನ ಅಂಗನವಾಡಿ ಕೇಂದ್ರದಲ್ಲಿ ಸೀಮಂತ ಕಾರ್ಯಕ್ರಮ ಮತ್ತು ಅನ್ನಪ್ರಾಸನ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಸನ್ನ ಕುಮಾರ್ ಅವರು ಪೋಷಣ್ ಮಾಸಾಚರಣೆಯ ಉದ್ದೇಶ ಪ್ರಾಮುಖ್ಯತೆ ಮತ್ತು ಅತಿಯಾದ ತೂಕ ನಿಯಂತ್ರಣ, ಪ್ರಾಥಮಿಕ ಬಾಲ್ಯ ಆರೈಕೆ ಮತ್ತು ಶಿಕ್ಷಣದ ಬಗ್ಗೆ ತೂಕದ ಮಹತ್ವದ ಬಗ್ಗೆ ತಿಳಿಸಿದರು.

ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಅನ್ನಪ್ರಾಸನ ಮತ್ತು ಸೀಮಂತ ಕಾರ್ಯಕ್ರಮದಲ್ಲಿ ಗರ್ಭಿಣಿ ಬಾಣಂತಿಯವರೊಂದಿಗೆ ಕುಟುಂಬದ ಪುರುಷರು ಪಾಲ್ಗೊಳ್ಳುವಂತಾಗಬೇಕು. ಈ ಬಗ್ಗೆ ಕಾರ್ಯಕರ್ತೆಯರು ಪ್ರಾಮುಖ್ಯತೆ ನೀಡಬೇಕು ಎಂದು ತಿಳಿಸಿದ ಅವರು, ಪೌಷ್ಟಿಕ ಕೈತೋಟ ಬೆಳೆಸಲು ಮಾರ್ಗದರ್ಶನ ನೀಡಿದರು.

ಅಂಗನವಾಡಿಯಲ್ಲಿ ದೊರೆಯುವ ಆಹಾರಗಳಲ್ಲಿ ಪೌಷ್ಟಿಕ ಆಹಾರ ತಯಾರಿಸಿ ಪ್ರದರ್ಶಿಸಲಾಯಿತು. ನಂತರ ಪೌಷ್ಟಿಕ ಆಹಾರದ ಸ್ಪರ್ಧೆ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಸಕೀನಾ, ವಣಚಲು ಅಂಗನವಾಡಿ ಕಾರ್ಯಕರ್ತೆ ಧರಣಿ, ಬಾಲವಿಕಾಸ ಸಮಿತಿ ಮಾಜಿ ಅಧ್ಯಕ್ಷೆ ಇಂದಿರಾ, ಸಹಾಯಕಿ ಲಾವಣ್ಯ, ಪ್ರಮುಖರಾದ ಜಯಂತಿ, ಸರೋಜಾ, ಪುಷ್ಪ, ಧರಣಿ ಸೇರಿದಂತೆ ಚೇರಂಬಾಣೆ ವೃತ್ತದ ಅಂಗನವಾಡಿ ಕಾರ್ಯಕರ್ತೆಯರು, ಸಿಕೋನ ಅಂಗನವಾಡಿ ಕೇಂದ್ರದ ಫಲಾನುಭವಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net