

ಮಡಿಕೇರಿ: ನಗರದ ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ, ಚದ್ಮವೇ?, ಸೀಮಂತ ಕಾರ್ಯಕ್ರಮ ಮತ್ತು ಸಮವಸ್ತ್ರ ವಿತರಣಾ ಕಾರ್ಯಕ್ರಮ ನೆರವೇರಿತು.
ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಾಂಡ ಸವಿತಾ ಕೀರ್ತನ್ ಮಾತನಾಡಿ, ಬಾಲಮೇಳ, ಚದ್ಮವೇ? ಕಾರ್ಯಕ್ರಮಗಳು ಮಕ್ಕಳಲ್ಲಿ ಸಮಾನತೆ ಮೂಡಿಸಲು ಇದು ಸಹಕಾರವಾಗುತ್ತದೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಮತ್ತು ಸಮುದಾಯದ ಸಹಕಾರ ಪಡೆದು ಅಂಗನವಾಡಿ ಕೇಂದ್ರವನ್ನು ಮಾದರಿ ಅಂಗನವಾಡಿ ಕೇಂದ್ರವನ್ನಾಗಿ ಮಾಡಲು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಸಲಹೆ ಮಾರ್ಗದರ್ಶನ ನೀಡಿದರು.
ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಸದಸ್ಯರಲ್ಲಿ ಅಂಗನವಾಡಿ ಕೇಂದ್ರಕ್ಕಾಗಿ ಹಲವಾರು ಬೇಡಿಕೆಗಳನ್ನು ಸಲ್ಲಿಸಲಾಯಿತು. ಛದ್ಮವೇಶದಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಬಹುಮಾನ, ವಿತರಿಸಲಾಯಿತು. ಪೋಷಣ್ ಅಭಿಯಾನ ಯೋಜನೆಯಡಿ ಮೂರು ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಮಾಡಲಾಯಿತು. ಮಕ್ಕಳಿಂದ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದಲ್ಲಿ ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್‌ರೈ ಅವರು ಸಿಹಿ ಹಂಚಿದರು. ಸದಸ್ಯರಾದ ಯಶ್ವಿನ್, ಪಶು ವೈದ್ಯಾಧಿಕಾರಿ ಶಿಲ್ಪ, ಮುರ್ನಾಡು ವೃತ್ತದ ಅಂಗನವಾಡಿ ಕಾರ್ಯಕರ್ತೆಯರು, ಪೋ?ಕರು ಪಾಲ್ಗೊಂಡಿದ್ದರು. ಜಸ್ಮಿನ್, ಗಣೇಶ್, ರವರು ಸಿಹಿ ವಿತರಿಸಿದರು. ಕ್ವಾಲಿಟಿ ಫ್ರೂಟ್ಸ್ ಅಂಗಡಿ ಮಾಲೀಕರಾದ ಆಸ್ಕರ್ ಅವರು ತಂಪು ಪಾನೀಯ ವಿತರಿಸಿದರು.