ನಾಯಕತ್ವದ ಗುಣದೊಂದಿಗೆ ಅವಕಾಶ ಸದುಪಯೋಗ

gan-7
Published on

ಕುಂದಾಪುರ: ಕಲಿಯುವ ಪ್ರಕ್ರಿಯೆಯಲ್ಲಿ ಭಯ, ನಾಚಿಕೆ ಹಾಗೂ ತಪ್ಪಿತಸ್ಥ ಭಾವನೆ ಇರಬಾರದು. ತಮಗೆ ಯಾವ ವಿಷಯದ ಬಗ್ಗೆ ಜ್ಞಾನ ಬೇಕೋ ಅದರ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ಪ್ರಯತ್ನಿಸಿ ನಾಯಕತ್ವದ ಗುಣ ಮೈಗೂಡಿಸಿಕೊಂಡು ಪದವಿ ಶಿಕ್ಷಣದ ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜೆಸಿಐ ಸೆನೆಟರ್ ಸದಾನಂದ ನಾವುಡ ಹೇಳಿದರು.

ಕೋಟೇಶ್ವರ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಘಟಕ ಮತ್ತು ಕನ್ನಡ ಸಂಘದ ಸಹಯೋಗದೊಂದಿಗೆ ಗುರಿ ಮತ್ತು ನಾಯಕತ್ವ ತರಬೇತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

ಪ್ರಾಂಶುಪಾಲ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಂಘ ಅಧ್ಯಕ್ಷ ನಾಗರಾಜ ವೈದ್ಯ ಎಂ., ಐಕ್ಯೂಎಸಿ ಸಂಚಾಲಕ ನಾಗರಾಜ ಯು. ಉಪಸ್ಥಿತರಿದ್ದರು. ಜೆಸಿಐ ಅಧ್ಯಕ್ಷ ಸುಬ್ರಹ್ಮಣ್ಯ ಆಚಾರ್ ನಿರೂಪಿಸಿದರು. ನವ್ಯಾ ಮತ್ತು ತಂಡದವರು ಪ್ರಾರ್ಥಿಸಿದರು. ರಾಕೇಶ್ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net