

ಮೈಸೂರು: ನಗರದ ದೇವರಾಜ ಮಾರುಕಟ್ಟೆ ಹಾಗೂ ಚಿಕ್ಕಗಡಿಯಾರ ಸುತ್ತಮುತ್ತ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿದ ನಗರ ಪಾಲಿಕೆ ಅಧಿಕಾರಿಗಳು 38,800 ರೂ. ದಂಡ ವಿಧಿಸಿದ್ದಾರೆ.
ನಗರದಲ್ಲಿ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆ ನಿಷೇಧಿಸಿದ್ದರೂ ಸಹ ನಗರದಲ್ಲಿ ವ್ಯಾಪಕ ಪ್ರಮಾಣದಲ್ಲಿ ಪ್ಲಾಸ್ಟಿಕ್ ಬಳಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತೆ ಮಧು ಹಾಗೂ ಅಧಿಕಾರಿಗಳ ತಂಡ ನಗರದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿದ ಸಂದರ್ಭ ಭಾರಿ ಪ್ರಮಾಣದಲ್ಲಿ ಪ್ಲಾಸ್ಟಿಕ್‌ಗಳನ್ನು ಮಾರಾಟಕ್ಕೆ ದಾಸ್ತಾನು ಇಟ್ಟಿರುವುದು ಕಂಡುಬಂತು. ಅಲ್ಲದೆ ನಗರದ ವಿವಿಧೆಡೆ 20 ಬ್ಲಾಕ್‌ಸ್ಪಾಟ್‌ಗಳನ್ನು ಶುಚಿಗೊಳಿಸಿ ತ್ಯಾಜ್ಯ ಸುರಿಯುತ್ತಿದ್ದವರಿಗೆ 4,500 ರೂ. ದಂಡ ವಿಧಿಸಲಾಯಿತು.