ಅಕ್ರಮ ಮದ್ಯ ವಶ

Published on

ಗುಂಡ್ಲುಪೇಟೆ: ತಾಲೂಕಿನ ಕೋಟೆಕೆರೆ ಗ್ರಾಮದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಿದ್ದ ಮನೆ ಮೇಲೆ ದಾಳಿ ನಡೆಸಿದ ಅಬಕಾರಿ ಪೊಲೀಸರು ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಗ್ರಾಮದ ಮಹದೇವಯ್ಯ ಎಂಬುವರ ಮಗ ಶಶಿಕಾಂತ್ ಆರೋಪಿಯಾಗಿದ್ದು, ತಲೆಮರೆಸಿಕೊಂಡಿದ್ದಾನೆ. ಈತ ತಮ್ಮ ಮನೆಯಲ್ಲಿ ಸಂಗ್ರಹಿಸಿದ್ದ 10.080 ಲೀಟರ್ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದರು. ಆರೋಪಿ ಪತ್ತೆ ಕ್ರಮ ವಹಿಸಲಾಗಿದೆ ಎಂದು ಅಬಕಾರಿ ಇನ್‌ಸ್ಪೆಕ್ಟರ್ ತನ್ವೀರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net