ದಾಖಲೆ ಇಲ್ಲದ ನಗದು ವಶ

21Kush04
ಕುಶಾಲನಗರ ಕೊಪ್ಪ ಗೇಟ್‌ನಲ್ಲಿ ಬೈಕಿನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ ಹಣವನ್ನು ಪೊಲೀಸರು ಮತ್ತು ತಪಾಸಣಾ ಕೇಂದ್ರದ ಅಧಿಕಾರಿಗಳು ವಶಪಡಿಸಿಕೊಂಡಿರುವುದು.
Published on

ಕುಶಾಲನಗರ: ಕೊಡಗು-ಮೈಸೂರು ಗಡಿಭಾಗ ಕೊಪ್ಪ ಗೇಟ್‌ನಲ್ಲಿ ಗುರುವಾರ ವಾಹನ ತಪಾಸಣಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳು ಕೊಪ್ಪ ಕಡೆಯಿಂದ ಕುಶಾಲನಗರಕ್ಕೆ ಅಗಮಿಸುತ್ತಿದ್ದ ಬೈಕ್ ತಪಾಸಣೆ ನಡೆಸಿ ಸೂಕ್ತ ದಾಖಲೆ ಇಲ್ಲದ 2.92 ಲಕ್ಷ ಹಣವನ್ನು ವಶಪಡಿಸಿಕೊಂಡಿದ್ದಾರೆ. ಹಣವನ್ನು ಕುಶಾಲನಗರದ ಖಜಾನೆಯಲ್ಲಿ ಇರಿಸಲಾಗಿದೆ. ಸೂಕ್ತ ದಾಖಲೆ ಒದಗಿಸಿದರೆ ಅವರ ಹಣ ವಾಪಸ್ ನೀಡಲಾಗುವುದು ಎಂದು ತಹಸೀಲ್ದಾರ್ ಕಿರಣ್ ಗೋರಯ್ಯ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net