ದಾಖಲೆ ಇಲ್ಲದ 99,20 ಲಕ್ಷ ರೂ ಸಾಗಾಟ: ಮದ್ದೂರು ಗಡಿಭಾಗದಲ್ಲಿ ವಶಕ್ಕೆ ಪಡೆದ ಚುನಾವಣಾಧಿಕಾರಿಗಳು

Seizure of undocumented money Lok Sabha Elections mandya
Published on

ಈ ಬಗ್ಗೆ ಅವರನ್ನು ಚುನಾವಣಾಧಿಕಾರಿಗಳು ಪ್ರಶ್ನಿಸಿದ್ದಾರೆ. ದೊರೆತ ಹಣಕ್ಕೆ ಸೂಕ್ತ ಉತ್ತರ, ದಾಖಲೆ ನೀಡದ ಪರಿಣಾಮ ಹಣವನ್ನು ವಶಕ್ಕೆ ಮಾಡಿದ್ದಾರೆ. ಈ ಸಂಬಂಧ ಮದ್ದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಿರೀಶ್ ಎಂಬಾತ ಬೆಂಗಳೂರಿನಿಂದ ಕೆ.ಆರ್.ಪೇಟೆ ಕಡೆಗೆ ಕ್ರೇಟಾ ಕಾರಿನಲ್ಲಿ ತೆರಳುತ್ತಿದ್ದಾಗ ಚೆಕ್‌ಫೋಸ್ಟ್ ಬಳಿ ನಿಲ್ಲಿಸಿ ಪರಿಶೀಲಿಸಿದಾಗ ಹಣ ಪತ್ತೆಯಾಗಿದೆ. ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ, ತಹಸೀಲ್ದಾರ್ ಕೆ.ಎಸ್.ಸೋಮಶೇಖರ್, ಮದ್ದೂರು ಪೋಲೀಸ್ ಠಾಣೆಯ ಇನ್ಸ್ ಪೆಕ್ಟರ್ ಕೆ.ಆರ್.ಪ್ರಸಾದ್ ಹಾಗೂ ಚುನಾವಣಾಧಿಕಾರಿ ಲೋಕನಾಥ್ ಹಾಗೂ ಪೋಲೀಸ್ ಸಿಬ್ಬಂದಿ ಕಾರನ್ನು ಪರಿಶೀಲನೆ ನಡೆಸಿದಾಗ ಚೀಲದಲ್ಲಿ ಹಣವನ್ನು ಪತ್ತೆ ಮಾಡಿದ್ದಾರೆ.

ಮಂಡ್ಯ: ಮದ್ದೂರು ತಾಲೂಕು ಕೊಂಗಬೋರನದೊಡ್ಡಿ ಬಳಿ ಸೋಮವಾರ ರಾತ್ರಿ ಕಾರಿನಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 99,20 ಲಕ್ಷ ರೂಗಳನ್ನು ಚುನಾವಣಾ ಸಿಬ್ಬಂದಿ ಮತ್ತು ಪೊಲೀಸರು ಜಪ್ತಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net