ಅಮೆಚೂರ ಸೈಕ್ಲಿಂಗ್ ಸಂಸ್ಥೆಗೆ ಆಯ್ಕೆ

IMG-20240321-WA0002.jpg
Published on

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಅಮೆಚೂರ ಸೈಕ್ಲಿಂಗ್ ಸಂಸ್ಥೆಯ ಅಧ್ಯಕ್ಷರಾಗಿ ಗದಗ ಜಿಲ್ಲೆಯ ಮಾಡೊಳ್ಳಿ ಗ್ರಾಮದ ಜಿ.ವಿ. ಪಾಟೀಲ್ ಅವರು ಆಯ್ಕೆಯಾಗಿದ್ದಾರೆ.

ವಿಜಯಪುರದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕಾರಿ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಹಿಂದಿನ ಅಧ್ಯಕ್ಷ ರಾಜು ಬಿರಾದಾರ ಅವರ ರಾಜಿನಾಮೆಯಿಂದಾಗಿ ತೆರವಾಗಿದ್ದ ಸ್ಥಾನಕ್ಕೆ ಸಂಸ್ಥೆಯ ಸದಸ್ಯರ ಸಹಮತದೊಂದಿಗೆ ಪಾಟೀಲ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಕಳೆದ 20 ವರ್ಷಗಳಿಂದ ರಾಜ್ಯ ಸೈಕ್ಲಿಂಗ್ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಇವರು, ಎರಡೂವರೇ ವರ್ಷದಿಂದ ಸಂಸ್ಥೆಯ ಚೇರ್ಮನ್ ರಾಗಿ ಕಾರ್ಯ ನಿರ್ವಹಿಸಿದ್ದರು.

ಹಿಂದಿನ ಅಧ್ಯಕ್ಷ ರಾಜು ಬಿರಾದಾರ ಅವರು ಸಂಸ್ಥೆಯ ಚೇರ್ಮನ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net