

ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ಕೆಎಲ್ಇ ವಾಣಿಜ್ಯ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸಾನಿಯಾ ಸುಬೇದಾರ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಮಾ. 16ರಿಂದ 19ರ ವರೆಗೆ ಚಂಡಿಗಡದ ಪಂಜಾಬ ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಲಾಗಿರುವ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯಗಳ ಮಹಿಳಾ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ತಂಡವನ್ನು ಸಾನಿಯಾ ಪ್ರತಿನಿಧಿಸುತ್ತಿದ್ದಾರೆ.
ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶನದಂತೆ ವಿದ್ಯಾಥಿರ್ನಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸ್ಪರ್ಧೆಗೆ ಬೇಕಾಗುವ ಕರಾಟೆ ಕಿಟ್ ನ್ನು ಕಾಲೇಜಿನಲ್ಲಿ ಪ್ರಾಚಾರ್ಯ ಮಂಜುನಾಥ ಮಾಗಿ ಹಾಗೂ ಸಿಬ್ಬಂದಿ ವರ್ಗದವರು ವಿತರಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಸುಮಿತ್ರಾ ಲಿಂಗದಹಳ್ಳಿ, ಶಗುಪ್ತಾನಾಜ ನದಾ ಇದ್ದರು.