

ಹುಬ್ಬಳ್ಳಿ: ನಗರದ ಬಿವಿಬಿ ಕಾಲೇಜ್ ಆವರಣದಲ್ಲಿರುವ ಕೆಎಲ್ಇ ಶಿಕ್ಷಣ ಸಂಸ್ಥೆಯ ವಾಣಿಜ್ಯ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಕರ್ನಾಟಕ ವಿಶ್ವವಿದ್ಯಾಲಯದ ಬ್ಲೂ ಆಗಿ ಆಯ್ಕೆಯಾಗಿದ್ದಾರೆ.
2022-2023ನೇ ಸಾಲಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ದಕ್ಷಿಣ ವಲಯ/ಅಂತರ ವಿಶ್ವವಿದ್ಯಾಲಯದ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ಸಾಚಿ ದೇಸಾಯಿ (ಬ್ಯಾಡ್ಮಿಂಟನ್), ಸಾನಿಯಾ ಸುಬೇದಾರ (ಕರಾಟೆ), ದಾನಮ್ಮ ಕೋರಿ ಮತ್ತು ಅಕ್ಷತಾ ಬಾರಗಿ (ಟೇಬಲ್ ಟೆನಿಸ್) ಭಾಗವಹಿಸಿದ್ದರು.
ವಿದ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯ ಡಾ. ವಿಠ್ಠಲ ಭಟ್, ಆಡಳಿತ ಮಂಡಳಿ ಸದಸ್ಯರು, ಬೋಧಕ-ಬೋಧಕೇತರ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.