

ವಿಜಯಪುರ: ನವಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ, ಕ್ರಿಕೆಟ್ ಪಟು ಸುಮಿತ್ ದೇಶಪಾಂಡೆ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಯೂನಿವರ್ಸಿಟಿ ಬ್ಲೂ ಆಗಿ ಆಯ್ಕೆಗೊಂಡಿದ್ದಾರೆ.
ಜನವರಿ ತಿಂಗಳಿನಲ್ಲಿ ಚೆನ್ನೈನಲ್ಲಿ ನಡೆಯುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯದ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಣಿ ಚನ್ನಮ್ಮ ವಿವಿ ಕ್ರಿಕೆಟ್ ತಂಡವನ್ನು ಸುಮಿತ್ ದೇಶಪಾಂಡೆ ಪ್ರತಿನಿಧಿಸಲಿದ್ದಾರೆ.
ವಿದ್ಯಾರ್ಥಿ ಸಾಧನೆಗೆ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಪ್ರಾಚಾರ್ಯ ಡಾ. ಎ.ಐ. ಹಂಜಗಿ, ಕ್ರೀಡಾ ನಿರ್ದೇಶಕ ಪ್ರೊ. ಸಂಗಮೇಶ ಗುರವ, ಐಕ್ಯೂಎಸಿ ಸಂಚಾಲಕ ಡಾ. ಸಂತೋಷ ಕಬಾಡೆ, ಕ್ರೀಡಾ ಸಮಿತಿ ಸದಸ್ಯ ಪ್ರೊ. ಎಂ.ಎಸ್. ಖೊದ್ನಾಪೂರ, ಡಾ. ಚಂದ್ರಕಾಂತ ಬಿ., ಡಾ. ದೇವೇಂದ್ರಗೌಡ ಮತ್ತಿತರರಿದ್ದರು.