ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

blm (5)
Published on

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ, ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಇಲ್ಲಿನ ಶ್ರೀ ಭುವನೇಂದ್ರ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕ್ರೈಸ್ಟ್‌ಕಿಂಗ್ ಆಂಗ್ಲವಾಧ್ಯಮ ಪ್ರಾಥಮಿಕ ಶಾಲೆ ಬಾಲಕಿಯರ ತಂಡ ಹಾಗೂ ಪ್ರೌಢಶಾಲೆ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಪ್ರಾಥಮಿಕ ಶಾಲಾ ಬಾಲಕಿಯರ ತಂಡವನ್ನು ಪ್ರತಿನಿಧಿಸಿದ್ದ ಎಂಟನೇ ತರಗತಿಯ ಖುಷಿ ಶೆಟ್ಟಿ, ವಿಶ್ಮಿತಾ, ಆರನೇ ತರಗತಿಯ ತ್ರಿಷ್ಮಾ ಎಸ್. ಹಾಗೂ ಕೆಟ್ಲಿನ್ ಏಂಜೆಲ್ ಪಿಂಟೊ ಜಿಲ್ಲಾಮಟ್ಟಕ್ಕೆ ಆಯ್ಕೆಯಾದರು. ಪ್ರೌಢಶಾಲಾ ಬಾಲಕರ ತಂಡವನ್ನು ಪ್ರತಿನಿಧಿಸಿದ್ದ ಹತ್ತನೇ ತರಗತಿಯ ಗೌರವ್ ಆರ್., ಪ್ರಥಮ್ ಶೆಟ್ಟಿ, ಶೋಭಿತ್ ಕೆ.ಎಚ್. ಹಾಗೂ ಅಚ್ಚು ವಿದ್ಯೋಪಾರ್ಜ್ ಗುರುಕುಲಂ ಮತ್ತು ಒಂಬತ್ತನೇ ತರಗತಿಯ ಗ್ಯಾಲ್ವಿನ್ ಜೋಯಲ್ ಪಿಂಟೊ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣ ಪ್ರಸಾದ್, ಪ್ರಕಾಶ್ ನಾಯ್ಕ ಹಾಗೂ ಲಾವಣ್ಯ ತಂಡಗಳ ನೇತೃತ್ವ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net