

ಮಡಿಕೇರಿ:
೨೦೨೩ನೇ ಸಾಲಿನ ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮಡಿಕೇರಿ ನಗರದ ದಸರಾ ಸಮಿತಿ ಕಚೇರಿಯಲ್ಲಿ ಬುಧವಾರ ನಡೆಯಿತು.
ಅಲಂಕಾರ ಸಮಿತಿ ಅಧ್ಯಕ್ಷ ಮುನೀರ್ ಮಾಚರ್ ಎಂ.ಎ. ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೌರವ ಸಲಹೆಗಾರರಾಗಿ ಮಂಜುನಾಥ್ ಪಿ. ಜಿ., ಉಪಾಧ್ಯಕ್ಷರಾಗಿ ರವಿಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಅರ್ಜುನ್ ರಾಜೇಂದ್ರ, ಕಾರ್ಯದರ್ಶಿಯಾಗಿ ಶರಣ್ ಕೆ., ಸಹ ಕಾರ್ಯದರ್ಶಿಯಾಗಿ ಲಿಲ್ಲಿಗೌಡ, ಖಜಾಂಜಿಯಾಗಿ ಸುನೀಲ್ ಟಿ.ಎಸ್., ಸಂಘಟನಾ ಕಾರ್ಯದರ್ಶಿಯಾಗಿ ಪುನೀತ್ ಜಿ. ಎನ್., ಉಪ ಸಂಘಟನಾ ಕಾರ್ಯದರ್ಶಿಯಾಗಿ ಭರತ್ ಜಿ.ಎನ್.,ಉಪ ಖಜಾಂಚಿಯಾಗಿ ಪುನೀತ್ ಅಮೆಮನೆ ಹಾಗೂ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ರಫೀಕ್ (ದಾದಾ) ಅವರುಗಳನ್ನು ಆಯ್ಕೆ ಮಾಡಲಾಯಿತು.