ಕವಿವಿ ಬಾಲ್ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆ

selected for KUD Ball badminton team
Published on

ಶಿಗ್ಗಾಂವಿ: ಪಟ್ಟಣದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಬಿಎ ಅಂತಿಮ ವರ್ಷದ ವಿದ್ಯಾರ್ಥಿ ಮಂಜುನಾಥ ತಳವಾರ ಕರ್ನಾಟಕ ವಿಶ್ವವಿದ್ಯಾಲಯದ ಬಾಲ್ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆಯಾಗಿದ್ದಾನೆ.

ಧಾರವಾಡದ ಕಿಟಲ್ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಕವಿವಿ ಬಾಲ್ ಬ್ಯಾಡ್ಮಿಂಟನ್ ಪುರುಷರ ತಂಡದ ಆಯ್ಕೆಯಲ್ಲಿ ರಂಭಾಪುರಿ ಪದವಿ ಮಹಾವಿದ್ಯಾಲಯದ ಕ್ರೀಡಾಪಟುಗಳು ಭಾಗವಹಿಸಿದ್ದರು. ಇದರಲ್ಲಿ ಮಂಜುನಾಥ ತಳವಾರ ಆಯ್ಕೆಯಾಗಿದ್ದಾನೆ. ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಕೋಲಾರದಲ್ಲಿ ನಡೆಯುವ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net