

ಹಾನಗಲ್ಲ: ಪಟ್ಟಣದ ಶ್ರೀ ಕುಮಾರೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಬಿಎ ಅಂತಿಮ ವರ್ಷದ ವಿದ್ಯಾರ್ಥಿ ಮಾಲತೇಶ ಹುಲಗಾಸಿ ಮತ್ತು ಬಿಕಾಂ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿನಿ ಸಂಜನಾ ತಳವಾರ ಕರ್ನಾಟಕ ವಿಶ್ವವಿದ್ಯಾಲಯದ ನೆಟ್ಬಾಲ್ ತಂಡಕ್ಕೆ ಆಯ್ಕೆಯಾಗಿ ಯುನಿವರ್ಸಿಟಿ ಬ್ಲೂ ಆಗಿ ಹೊರಹೊಮ್ಮಿದ್ದಾರೆ.
ಜ. 3ರಿಂದ 9ರವರೆಗೆ ಜೈಪುರದ ಸುರೇಶ ಜ್ಞಾನ ವಿಹಾರ ಯುನಿವರ್ಸಿಟಿಯಲ್ಲಿ ನಡೆಯಲಿರುವ ಅಖಿಲ ಭಾರತ ವಿಶ್ವವಿದ್ಯಾಲಯಗಳ ನೆಟ್ಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ತಂಡ ಪ್ರತಿನಿಸುತ್ತಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಬಸನಗೌಡ ಲಕ್ಷೆ್ಮೕಶ್ವರ ಮಾರ್ಗದರ್ಶನ ನೀಡಿದ್ದಾರೆ.