ಯೋಗಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

YOGA WINNERS
Published on

ಯಲ್ಲಾಪುರ: ಯೋಗ ಫೆಡರೇಶನ್ ಆಫ್ ಇಂಡಿಯಾದವರು ಸಾಗರದಲ್ಲಿ ನಡೆಸಿದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ತಾಲೂಕಿನ ಯೋಗಪಟುಗಳು ಸಾಧನೆ ಮಾಡಿದ್ದಾರೆ.

ನೇತ್ರಾವತಿ ಭಟ್ಟ ವಜ್ರಳ್ಳಿ ಅವರು 30-35 ವರ್ಷ ವಯೋಮಿತಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪವನ ನಾರಾಯಣ ಕೋಮಾರ 18-21 ವರ್ಷ ವಯೋಮಿತಿಯ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಯಲ್ಲಾಪುರ ಓಂಕಾರ ಯೋಗ ಚಿಕಿತ್ಸಾ ಕೇಂದ್ರದ ಸುಬ್ರಾಯ ಭಟ್ಟ ಆನೆಜಡ್ಡಿ ಅವರು 50-60 ವರ್ಷ ವಯೋಮಿತಿಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net