

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಕರ್ನಾಟಕ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿನಿ ನಯನಾ ಎಚ್.ಎ. ಅವರು 2025ರ ಗಣರಾಜ್ಯೋತ್ಸವ ಪರೇಡ್‌ಗೆ ಆಯ್ಕೆಯಾಗಿದ್ದಾರೆ. ವಿಜಯನಗರ ಜಿಲ್ಲೆ ಹರಪನಹಳ್ಳಿಯ ನಯನಾ, ಜ. 26ರಂದು ನವದೆಹಲಿಯ ಕರ್ತವ್ಯಪಥದಲ್ಲಿ ನಡೆಯುವ ಪರೇಡ್‌ನಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕ 2/24 ಎನ್‌ಸಿಸಿ ಬಟಾಲಿಯನ್‌ನಿಂದ ಆಯ್ಕೆಯಾಗಿರುವ ಏಕೈಕ ಕೆಡೆಟ್ ನಯನಾ, ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಽಸಲಿದ್ದಾರೆ. ಈ ವಿಶೇಷ ಸಾಧನೆಗೆ ಎಎನ್‌ಒ ಕ್ಯಾಪ್ಟನ್ ಡಾ. ವೈ.ಎಸ್. ರಾಹುತ್, ಕರ್ನಲ್ ಜೆ.ಆರ್. ಚೌಧರಿ, ಲೆಪ್ಟಿನೆಂಟ್ ಕರ್ನಲ್ ವೈ.ಎಸ್. ರನಾವತ್ ಅವರ ಮಾರ್ಗದರ್ಶನ ಹಾಗೂ ಪ್ರಾಚಾರ್ಯ ಡಾ. ಡಿ.ಬಿ. ಕರಡೋನಿ ಅವರ ಪ್ರೋತ್ಸಾಹ ಕಾರಣ ಎಂದು ನಯನಾ ಪ್ರತಿಕ್ರಿಯಿಸಿದ್ದಾರೆ.