ಚೆಸ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

gan (10)
Published on

ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಮತ್ತು ಉಪ್ಪುಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಯಡಾಡಿಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ವಾಧ್ಯಮ ಶಾಲೆಯ ಪ್ರಕೃತಿ ಪಿ.ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಸಂಸ್ಥೆ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್‌ಕುವಾರ್ ವಾರ್ಗದರ್ಶನ ನೀಡಿದ್ದರು. ಸಂಸ್ಥೆಯ ವಸತಿ ನಿಲಯದ ಪಾಲಕಿ ಸ್ಫೂರ್ತಿ ತಂಡದ ವ್ಯವಸ್ಥಾಪಕಿಯಾಗಿ ಕಾರ್ಯ ನಿರ್ವಹಿಸಿದ್ದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯ ಶಿಕ್ಷಕ ಪ್ರದೀಪ್ ಕೆ. ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net