

ಹುಬ್ಬಳ್ಳಿ: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಇತ್ತೀಚೆಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಇಲ್ಲಿಯ ವಿಶ್ವೇಶ್ವರ ನಗರದ ಶಾಂತಿ ಕಾಲನಿಯ ಶ್ರೀಮತಿ ನಿರ್ಮಲಾ ಕೆ. ಠಕ್ಕರ್ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿನಿಯರು ಯಶಸ್ಸು ಸಾಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶ್ರೇಯಾ ರತನ್, ಶ್ರೀಯಾ ಕೋಟೇಶ್ವರ, ಪೂರ್ವ ಖುರ್ಷಪೂರ ಆಯ್ಕೆಯಾದ ವಿದ್ಯಾರ್ಥಿನಿಯರು. ವಿದ್ಯಾರ್ಥಿನಿಯರ ಸಾಧನೆಗೆ ಆಡಳಿತ ಮಂಡಳಿ, ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.