ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚೀಕನಹಳ್ಳಿ ಶಾಲೆ ವಿದ್ಯಾರ್ಥಿಗಳು ಆಯ್ಕೆ

30blrp8
ಅರೇಹಳ್ಳಿಯಲ್ಲಿ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಚೀಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆಯ ಕ್ರೀಡಾಪಟುಗಳು.
Published on

ಬೇಲೂರು: ತಾಲೂಕಿನ ಅರೇಹಳ್ಳಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಂಗಳವಾರ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಚೀಕನಹಳ್ಳಿ ಶಾಲೆ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯೊಂದಿಗೆ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಹಿರಿಯ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಚೀಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು ಕಬಡ್ಡಿಯಲ್ಲಿ ಚಾಂಪಿಯನ್ ಶಿಪ್ ಪಡೆದರೆ, ಬಾಲಕಿಯರ ವಿಭಾಗದಲ್ಲಿ 100 ಮೀಟರ್ ಓಟ ಪ್ರಥಮ, ಗುಂಡು ಎಸೆತ ಪ್ರಥಮ, ರಿಲೇ ಪ್ರಥಮ ಸ್ಥಾನ ಪಡೆದು ಮೇಲುಗೈ ಸಾಧಿಸಿದ್ದಾರೆ. ಈ ಗೆಲುವಿನ ಮೂಲಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚೀಕನಹಳ್ಳಿ ತಂಡವು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.

ಚೀಕನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಡಿ.ವಿ.ಮಂಜುನಾಥ್, ಕಡೇಗರ್ಜೆ ಸುನೀಲ್ ದ್ರಾವಿಡ್, ಹುನುಗನಹಳ್ಳಿ ಪ್ರವೀಣ್ ಹಾಗೂ ಶಿಕ್ಷಕರು ಕ್ರೀಡಾಪಟುಗಳನ್ನು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net