

ವಿಜಯಪುರ: ಇಲ್ಲಿನ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಪಟುಗಳು 2024&25ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಕ್ರೀಡೆಗೆ ಆಯ್ಕೆಯಾಗಿದ್ದಾರೆ.
ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಬಾಲ್ಬ್ಯಾಡ್ಮಿಂಟನ್ ಕ್ರೀಡೆ ಮಾ. 29 ರಿಂದ ಏ. 1ರ ವರೆಗೆ ತಮಿಳುನಾಡಿನ ಕಾರೈಕುಡಿಯ ಅಲಗಪ್ಪ ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿದೆ. ಸದರಿ ಕ್ರೀಡಾಕೂಟದ ತಂಡಕ್ಕೆ ತರಬೇತುದಾರರಾಗಿ ಮಂಜಪ್ಪ ಸಿ.ಎಸ್., ವ್ಯವಸ್ಥಾಪಕರಾಗಿ ಮಹಾಂತೇಶ ಎಲ್. ಭಾಗವಹಿಸುವರೆಂದು ವಿವಿ ಪ್ರಕಟಣೆ ತಿಳಿಸಿದೆ.
ಆಯ್ಕೆಯಾದ ಕ್ರೀಡಾಪಟುಗಳ ತಂಡಕ್ಕೆ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ., ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಖರ, ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ, ಮುಖ್ಯಸ್ಥ ಡಾ. ಹನುಮಂತಯ್ಯ ಪೂಜಾರ, ಸಹ ನಿರ್ದೇಶಕ ವಿಶ್ವನಾಥ ನಡಕಟ್ಟಿ ಹಾಗೂ ಶಿಕ್ಷಣ ನಿಕಾಯದ ಡೀನ್ ಪ್ರೊ. ಸಕ್ಪಾಲ್ ಹೂವಣ್ಣ ಶುಭ ಹಾರೈಸಿದ್ದಾರೆ.