ಬೆರಗು ಪ್ರಕಾಶನ ಪ್ರಶಸ್ತಿಗೆ ಆಯ್ಕೆ

Selected for the Beragu Publication Award
ಎಚ್​.ಎಂ. ಪೂಜಾರ,  ವಾಸುದೇವ ರಾಹುತ್​
Published on

ಆಲಮೇಲ: ತಾಲೂಕಿನ ಕಡಣಿ ಗ್ರಾಮದ ಬೆರಗು ಪ್ರಕಾಶನ ಸಂಸ್ಥೆಯಿಂದ 2024ನೇ ಸಾಲಿನ ಅತ್ಯುತ್ತಮ ಪ್ರಕಾಶನಕ್ಕೆ ನೀಡುವ ದಿ. ಎಂ.ಸಿ. ಮನಗೂಳಿ ದತ್ತಿ ಪ್ರಶಸ್ತಿಯನ್ನು ಬೆಂಗಳೂರಿನ ಸಾಧನಾ ಪ್ರಕಾಶನಕ್ಕೆ, ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿಯನ್ನು ಹಿರಿಯ ಮಕ್ಕಳ ಸಾಹಿತಿ ಹ.ಮ. ಪೂಜಾರ ಅವರಿಗೆ ಹಾಗೂ ಉತ್ತಮ ಮುಖಪುಟ ಕಲಾವಿದರಿಗೆ ನೀಡುವ ಬೆರಗು ಮುಖಪುಟ ವಿನ್ಯಾಸ ಪ್ರಶಸ್ತಿಗೆ ಗದಗದ ವಾಸುದೇವ ರಾವುತ್​ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬೆರಗು ಪ್ರಕಾಶನ ಸಂಸ್ಥೆಯ ಅಧ್ಯೆ ವಿಜಯಲಕ್ಷಿ$್ಮ ಆರ್​. ಕತ್ತಿ ತಿಳಿಸಿದ್ದಾರೆ.

ಅತ್ಯುತ್ತಮ ಪ್ರಕಾಶನಕ್ಕೆ ನೀಡುವ ದಿ. ಎಂ.ಸಿ. ಮನಗೂಳಿ ದತ್ತಿ ಪ್ರಶಸ್ತಿಯು 25 ಸಾವಿರ ರೂ. ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ. ಶಾಸಕ ಅಶೋಕ ಮನಗೂಳಿ ಅವರು ತಮ್ಮ ತಂದೆಯವರ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ. ಬೆಂಗಳೂರಿನ ಸಾಧನಾ ಪ್ರಕಾಶನ ಕಳೆದ ನಾಲ್ಕು ದಶಕಗಳಿಂದ ನಿರಂತರ ಪುಸ್ತಕೊದ್ಯಮದಲ್ಲಿ ತೊಡಗಿಕೊಂಡಿದ್ದು, ಈವರೆಗೆ ಮೂರು ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ಮೊದಲ ವರ್ಷದ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿಗೆ ಹ.ಮ. ಪೂಜಾರ ಅವರನ್ನು ಆಯ್ಕೆ ಮಾಡಲಾಗಿದ್ದು, 10 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಲಕ ಒಳಗೊಂಡಿದೆ. ಕಳೆದ ಐದು ದಶಕಗಳಿಂದ ಮಕ್ಕಳ ಸಾಹಿತ್ಯ ರಚನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಮುಖಪುಟ ವಿನ್ಯಾಸಕ್ಕೆ ನೀಡುವ ಪ್ರಶಸ್ತಿ 5 ಸಾವಿರ ರೂ. ನಗದು, ಪ್ರಶಸ್ತಿ ಪತ್ರ ಒಳಗೊಂಡಿದೆ. ಗದಗದ ವಾಸುದೇವ ರಾವುತ್​ ಅವರು ಈವರೆಗೆ 500ಕ್ಕೂ ಹೆಚ್ಚು ಮುಖಪುಟಗಳನ್ನು ಹಾಗೂ ಸಾವಿರಕ್ಕೂ ಹೆಚ್ಚು ಪುಸ್ತಕಗಳ ಪುಟ ವಿನ್ಯಾಸವನ್ನು ಮಾಡಿದ ತೆರೆಮರೆಯ ಕಲಾವಿದರಾಗಿದ್ದಾರೆ. ಡಿಸೆಂಬರ್​ 24 ರಂದು ಸಿಂದಗಿಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ವಿಜಯಲಕ್ಷಿ$್ಮ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net