ಕರ್ನಾಟಕ ಮುಕುಟಮಣಿ ಪ್ರಶಸ್ತಿಗೆ ಆಯ್ಕೆ

Ism_Abhubakkar
Published on

ಪುತ್ತೂರು ಗ್ರಾಮಾಂತರ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕೊಡಮಾಡುವ ಈ ಬಾರಿಯ ಕರ್ನಾಟಕ ಮುಕುಟಮಣಿ ಪ್ರಶಸ್ತಿಗೆ ಪಾಣಾಜೆಯ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್‌ನ ಅಧ್ಯಕ್ಷ ಎಸ್.ಅಬೂಬಕ್ಕರ್ ಆರ್ಲಪದವು ಆಯ್ಕೆಗೊಂಡಿದ್ದಾರೆ.

60ಕ್ಕಿಂತಲೂ ಅಧಿಕ ಪ್ರಶಸ್ತಿ-ಸನ್ಮಾನಗಳನ್ನು ಪಡೆದಿರುವ ಎಸ್.ಅಬೂಬಕ್ಕರ್ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿ ಕನ್ನಡ ನಾಡು, ನುಡಿ, ಕಲೆ, ಸಾಹಿತ್ಯ ಸಂಘಟನೆ, ಸಮಾಜಸೇವೆ ಮೊದಲಾದ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಡಿ.1ರಂದು ದಾವಣಗೆರೆಯಲ್ಲಿ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net