ಜಾವೇಲಿನ್ ಥ್ರೋನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಜಾವೇಲಿನ್ ಥ್ರೋನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
Published on

ಹನೂರು: ಉಡುಪಿ ಜಿಲ್ಲೆ ಬ್ರಹ್ಮಾವರದಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ಅಂಗವಿಕಲ ಕ್ರೀಡಾಕೂಟದಲ್ಲಿ ಹನೂರು ಶೈಕ್ಷಣಿಕ ವಲಯದ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಹನೂರಿನ ಬಿಎಂಜಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಾಗವೇಣಿ ಶಾಟ್‌ಪುಟ್ ಹಾಗೂ ಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಅನುಷಾ ಜಾವೆಲಿನ್ ಥ್ರೋನಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯರು ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಕರನ್ನು ಅಂಗವಿಕಲ ವಿಶೇಷ ಶಿಕ್ಷಕ ಕೃಷ್ಣ ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net