

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ನಲ್ಲಿ ತಾಲೂಕಿನ ತಿಮ್ಮಾಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಸಾಗರ ಲಮಾಣಿ 100 ಮೀ.ಓಟದಲ್ಲಿ ಪ್ರಥಮ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇದಲ್ಲದೆ ಗುಂಡು ಎಸೆತದಲ್ಲಿ ತೃತೀಯ ಪಡೆದಿದ್ದಾನೆ. ಉಳಿದಂತೆ ಈಶ್ವರಿ ಹೊನೊಲೆ 200 ಮೀ. ಓಟದಲ್ಲಿ ದ್ವೀತಿಯ, ಆದಿತ್ಯಾ ತಳವಾರ 50 ಮೀ. ಓಟದಲ್ಲಿ ಹಾಗೂ ಉದ್ದ ಜಿಗಿತ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದೆ.