ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಆಯ್ಕೆ...

Divakar
Published on

ಗಮನ ಸೆಳೆದ ದಿವಾಕರ ಗಣಪತಿ ನಾಯಕ

ತೆಂಕನಿಡಿಯೂರು ಕಾಲೇಜ್​ ಅಧ್ಯಾಪಕ

ಉಡುಪಿ: ಮಹಾತ್ಮಾ ಗಾಂಧಿ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮೆರೆದ ಜಿಲ್ಲಾ ಸರ್ಕಾರಿ ನೌಕರರ ಕಾರ್ಯಕಾರಿಣಿ ಸಂಘದ ಜಿಲ್ಲಾ ಕ್ರೀಡಾ ಕಾರ್ಯದರ್ಶಿ ದಿವಾಕರ ಗಣಪತಿ ನಾಯಕ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

800 ಮೀಟರ್​ ಓಟ ಮತ್ತು ಚಕ್ರ ಎಸೆತದಲ್ಲಿ ಸ್ಪರ್ಧಿಸಿದ್ದ ಅವರು, ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗಳಿಸಿದ್ದರು.

ಸಾಧಕ ದಿವಾಕರ, ತೆಂಕನಿಡಿಯೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಧ್ಯಾಪಕರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net