ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

anushka alisha
ಅನುಷ್ಕಾ ಆರ್.ಖಾರ್ವಿ, ಅಲಿಷಾ ಕ್ಲಿಯಾಂತ ಬಿ.
Published on

ಕಾರ್ಕಳ: ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ವತಿಯಿಂದ ಸೋಮವಾರ ನಡೆದ 2024-25ನೇ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾ ನಗರದ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಭಾಗವಹಿಸಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಅನುಷ್ಕಾ ಆರ್.ಖಾರ್ವಿ ದ್ವಿತೀಯ ಸ್ಥಾನ ಮತ್ತು ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಅಲಿಷಾ ಕ್ಲಿಯಾಂತ ಬಿ. ತೃತೀಯ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net