ಕಲಿಕೋತ್ಸವ ವಸ್ತುಪ್ರದರ್ಶನದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

24.npk-2
ಚೆಯ್ಯಂಡಾಣೆಯ ನರಿಯಂದಡ ಕೇಂದ್ರ ಪ್ರೌಢಶಾಲೆಯ ವಿದ್ಯಾರ್ಥಿಗಳು ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ ವಸ್ತುಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Published on

ನಾಪೋಕ್ಲು: ಕೊಡಗು ಜಿಲ್ಲಾ ಪಂಚಾಯಿತಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಡಿಕೇರಿ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ 2024-25 ರ ಸಾಲಿನ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ ವಸ್ತುಪ್ರದರ್ಶನದಲ್ಲಿ ಸಮೀಪದ ಚೆಯ್ಯಂಡಾಣೆಯ ನರಿಯಂದಡ ಕೇಂದ್ರ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಸ್ತುಪ್ರದರ್ಶನದಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿಗಳಾದ ಎಚ್.ಆರ್.ಗಣಪತಿ ಹಾಗೂ ಕೆ.ಆರ್.ಕಿರಣ್ ಅವರೊಂದಿಗೆ ವೃತ್ತಿ ಶಿಕ್ಷಣ ಶಿಕ್ಷಕ ಬಿ.ಬಿ.ರವೀಂದ್ರನಾಥ್ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net