

ಮಡಿಕೇರಿ:
ಮಡಿಕೇರಿ ತಾಲೂಕು ಹಾಕತ್ತೂರು ವಿವಿಧೊದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಮಂದ್ರೀರ ತೇಜಸ್ ನಾಣಯ್ಯ ಮತ್ತು ಉಪಾಧ್ಯಕ್ಷರಾಗಿ ಮಞೀರ ಉಮೇಶ್ ಅಪ್ಪಣ್ಣ ಅವಿರೋಧವಾಗಿ ಆಯ್ಕೆಯಾದರು. ಶುಕ್ರವಾರ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಈ ಆಯ್ಕೆ ನಡೆಯಿತು. ೧೩ ನಿರ್ದೇಶಕರ ಸ್ಥಾನಕ್ಕೆ ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಬಿ.ಜೆ.ಪಿ. ಬೆಂಬಲಿತ ೧೦ ನಿರ್ದೇಶಕರು ಮತ್ತು ಕಾಂಗ್ರೆಸ್ ಬೆಂಬಲಿತ ೩ ನಿರ್ದೇಶಕರು ಗೆಲುವು ಸಾಧಿಸಿದ್ದರು.