ಹಾಕಿ ತಂಡಕ್ಕೆ ಆಯ್ಕೆ

h21-kh patil college
Published on

ಹುಬ್ಬಳ್ಳಿ: ಕರ್ನಾಟಕ ವಿಶ್ವವಿದ್ಯಾಲಯದ ಹಾಕಿ ತಂಡಕ್ಕೆ ಹುಬ್ಬಳ್ಳಿಯ ವೇಮನ ವಿದ್ಯಾವರ್ಧಕ ಸಂಘದ ಕೆ.ಎಚ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾಥಿನಿಯರಾದ ಗೋಹರಬಾನು ಚಾವುಸ, ದೀಪಾ ಗುಮ್ಮಗೋಳ, ನಸ್ರೀನಬೇಗಂ ಮಡಿವಾಳರ ಇತ್ತೀಚೆಗೆ ಆಯ್ಕೆಯಾಗಿದ್ದಾರೆ. ಸಂಘದ ಗೌರವ ಕಾರ್ಯದರ್ಶಿ ಆರ್.ಕೆ. ಪಾಟೀಲ, ಸ್ಥಾನಿಕ ಆಡಳಿತ ಮಂಡಳಿ ಚೇರ್ಮನ್ ಜಿ.ಬಿ. ಗೌಡಪ್ಪಗೋಳ, ಪ್ರಾಚಾರ್ಯ ಎಸ್.ಬಿ. ಸಣಗೌಡ್ರ, ದೈಹಿಕ ಶಿಕ್ಷಣ ಉಪನ್ಯಾಸಕ ಮೃತ್ಯುಂಜಯ ಅಗಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net