ರಾಜ್ಯ ಮಟ್ಟಕ್ಕೆ ಆಯ್ಕೆ

bidi
Published on

ಹುಬ್ಬಳ್ಳಿ: ಜಿಲ್ಲಾ ಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಯ ಸ್ಥಳದಲ್ಲಿ ಪಾಠ ಉಪಕರಣ ತಯಾರಿಕೆಯಲ್ಲಿ ತಾಲೂಕಿನ ಕುರಡಿಕೇರಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ರಾಜಶ್ರೀ ಬೀಡಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಶಿಕ್ಷಕರ ಕಲ್ಯಾಣ ನಿಧಿ, ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಗಳ ಆಶ್ರಯದಲ್ಲಿ ಸ್ಪರ್ಧೆ ಆಯೋಜಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net