

ಸೋಮವಾರಪೇಟೆ: ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟದ ಪ್ರಾಥಮಿಕ ಶಾಲಾ ವಿಭಾಗದ ಭಾರದ ಗುಂಡು ಎಸೆತದಲ್ಲಿ ಹೊಸತೋಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿ ವಿ.ಭವಿಷ್ಯಾ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದರು.
ನ. 1ರಿಂದ 3ರ ವರೆಗೆ ಉಡುಪಿಯಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮತ್ತೊರ್ವ ವಿದ್ಯಾರ್ಥಿನಿ ದೀಕ್ಷಿತಾ ಭಾರದ ಗುಂಡು ಹಾಗೂ ತಟ್ಟೆ ಎಸೆತದಲ್ಲಿ ತೃತೀಯ ಸ್ಥಾನ ಪಡೆದರು. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಎಚ್.ಎನ್. ಕೆಂಚವ್ವ ತರಬೇತಿ ನೀಡಿದ್ದಾರೆ.