

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ವಿದ್ಯಾಗಿರಿ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಶಾಲೆಯ ಬಾಲಕಿಯರ ಕಬಡ್ಡಿ ತಂಡವು ದಾವಣಗೆರೆಯ ಬಾಪೂಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಿಬಿಎಸ್‌ಇ ಕ್ಲಸ್ಟರ್ 8ರ ಕಬಡ್ಡಿ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿದೆ.
ಈ ತಂಡವು ಹರಿಯಾಣದ ಗ್ರೀನ್‌ಲ್ಯಾಂಡ್ ಪಬ್ಲಿಕ್ ಶಾಲೆಯಲ್ಲಿ ಅ. 17ರಿಂದ 20ರವರೆಗೆ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾಗಿದೆ. ವಿದ್ಯಾರ್ಥಿನಿಯರು ಮತ್ತು ತರಬೇತುದಾರರಾದ ಮೀನಾಕ್ಷಿ ಹೊಸಮನಿ ಹಾಗೂ ಗಿರೀಶ ಹಾವನೂರು ಅವರನ್ನು ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್ ಅಭಿನಂದಿಸಿದರು. ಪ್ರಾಚಾರ್ಯೆ ಸಾಧನಾ ಎಸ್., ಮಹಾವೀರ ಉಪಾಧ್ಯಾಯ ಹಾಗೂ ಶಿಕ್ಷಕರಿದ್ದರು.