ರಾಷ್ಟ್ರ ಮಟ್ಟಕ್ಕೆ ಆಯ್ಕೆ

15 vikram 3
Published on

ಧಾರವಾಡ: ಚಿಕ್ಕಮಂಗಳೂರಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ರಾಜ್ಯಮಟ್ಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ ನಗರದ ಅದಿತಿ ಕಂಬಳಿ ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಮುಮ್ಮಿಗಟ್ಟಿಯ ಪಾಲಾಕ್ಷ ಲರ್ನ್ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿರುವ ಅದಿತಿಗೆ ಅಂಜಲಿ, ಪರಪ್ಪ ಹಾಗೂ ಆನಂದ ಅವರು ಟೇಕ್ವಾಂಡೋ ತರಬೇತಿ ನೀಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net