ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆ

09 HANUR 5
Published on


ಚಾಮರಾಜನಗರ: ಹನೂರು ಪಟ್ಟಣದ ಬಿಆರ್‌ಸಿ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ದಿನ್ನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಶಾಲೆಯ ವಿದ್ಯಾರ್ಥಿಗಳಾದ ಮಹಿನಾ ಬಾನು, ಗೌತಮ್, ಸಂಜನಾ ಹಾಗೂ ಸಿಂಧು ಅವರು ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಮುಖ್ಯಶಿಕ್ಷಕ, ಶಿಕ್ಷಕರನ್ನು ಬಿಇಒ ಎಂ.ಶಿವರಾಜು ಅಭಿನಂದಿಸಿದರು. ಈ ವೇಳೆ ಶಿಕ್ಷಣ ಸಂಯೋಜಕರಾದ ಕಿರಣ್‌ಕುಮಾರ್, ಕಂದವೇಲು ಹಾಗೂ ಶಿಕ್ಷಕ ಕೃಷ್ಣೇಗೌಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net