ಕಬಡ್ಡಿ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

20-GPT-2
Published on

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಕೋಡಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಗುರುವಾರ ಚಾಮರಾಜನಗರದಲ್ಲಿ ನಡೆದ ಜಿಲ್ಲಾಮಟ್ಟ ಕ್ರೀಡಾಕೂಟದಲ್ಲಿ ಕಬಡ್ಡಿ ಸ್ಪರ್ಧೆಯಲ್ಲಿ ವಿಜೇತರಾಗಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಮುಖ್ಯಶಿಕ್ಷಕ ಮಹದೇವಸ್ವಾಮಿ, ದೈಹಿಕ ಶಿಕ್ಷಕ ಶಿಕ್ಷಕಿ ದಾಕ್ಷಾಯಿಣಿ, ಕುಮಾರ್, ರಶ್ಮಿ, ಉಮಾ, ಸಿದ್ಧಶೆಟ್ಟಿ ಹಾಗೂ ಪ್ರೇಮ್‌ಕುಮಾರ್ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net