

ಮಡಿಕೇರಿ: ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ೨೦೨೩-೨೪ನೇ ಸಾಲಿನ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬಾಲಕಿಯರು ಪ್ರಥಮ ಸ್ಥಾನ ಪಡೆದಿದ್ದಾರೆ.
ಇತ್ತೀಚೆಗೆ ಗದಗ ನಗರದ ಮಹಾತ್ಮಾ ಗಾಂಧಿ ಹಾಕಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯವಳಿಯಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ೧೮ ಬಾಲಕಿಯರು ಭಾಗವಹಿಸಿದ್ದರು. ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ವಿಜಯಶಾಲಿಯಾಗಿದ್ದು, ಪಂಜಾಬ್‌ನ ಜಲಂಧರ್‌ನಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಜಯ್ ತಿಳಿಸಿದ್ದಾರೆ.
ಈ ಸಂಬಂಧ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಇತರರು ಅಭಿನಂದಿಸಿದ್ದಾರೆ.